ಪ್ರಧಾನಿ ಮೋದಿಗೆ ಬೆದರಿಕೆ: ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿದ ಗುಜರಾತ್ ಎಟಿಎಸ್
ನವದೆಹಲಿ ನ.28 : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಐಐಟಿ ವಿದ್ಯಾರ್ಥಿಯೋರ್ವನನ್ನು ಗುಜರಾತ್ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಬಂಧಿಸಿದರು.
ಬಂಧಿತ ಆರೋಪಿ ಯುವಕನನ್ನು ಅಮಾನ್ ಸಕ್ಸೇನಾ ಎಂದು ಗುರುತಿಸಲಾಗಿದೆ.
ಆರೋಪಿಯ ಬಂಧನ ಕಾರ್ಯಾಚರಣೆಯಲ್ಲಿ ಗುಜರಾತ್ ನ ಭಯೋತ್ಪಾದಕ ನಿಗ್ರಹ ದಳ ಮತ್ತು ಉತ್ತರಪ್ರದೇಶ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಹಾಗೂ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ಅವರಿಗೆ ಇ-ಮೇಲ್ ಮೂಲಕ ಬೆದರಿಕೆಯೊಡ್ಡಿದ್ದ ಸಕ್ಸೇನಾ ಹಾಗೂ ಗುಜರಾತ್ ಮೂಲದ ಮಹಿಳೆ ಮತ್ತು ಆಕೆಯ ದೆಹಲಿ ಮೂಲದ ಗೆಳೆಯನ ವಿರುದ್ಧ ದೂರು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಕ್ಸೇನಾ ಬೆದರಿಕೆಯೊಡ್ಡಿ ಇ-ಮೇಲ್ ಮಾಡಿದ್ದ ಎನ್ನಲಾಗಿದ್ದು, ಈ ಆರೋಪದಲ್ಲಿ ಉತ್ತರಪ್ರದೇಶದ ಬುದೌನ್ ಜಿಲ್ಲೆಯಲ್ಲಿರುವ ತಂದೆಯ ಮನೆಯಲ್ಲಿದ್ದ ಸಕ್ಸೇನಾನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮಾಧ್ಯಮ ವರದಿಯಿಂದ ತಿಳಿದು ಬಂದಿದೆ.