ಉಡುಪಿ : ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ ,ಸ್ಕೂಟರ್ ಸವಾರ ಗಂಭೀರ

ಉಡುಪಿ(ಉಡುಪಿ ಟೈಮ್ಸ್ ವರದಿ) : ಕಾರು ಹಾಗೂ  ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಎಮ್ ಜಿ ಎಮ್ ಕಾಲೇಜ್ ಬಳಿ ನಡೆದಿದೆ. 

ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಾರೊಂದು ಎಂಜಿಎಂ ಕಾಲೇಜು ಬಳಿ ಹೋಗುತ್ತಿದ್ದಂತೆ ಮುಂದಿನಿಂದ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!