ಉಡುಪಿ: ನಡುಬೀದಿಯಲ್ಲೇ ವಿದ್ಯಾರ್ಥಿಗಳಿಗೆ ತಂಡದಿಂದ ಹಲ್ಲೆ
ಉಡುಪಿ ನ.28(ಉಡುಪಿ ಟೈಮ್ಸ್ ವರದಿ): ಅಜ್ಜರಕಾಡು ಆಸ್ಪತ್ರೆಯ ಎದುರಿನ ಶಾಲಾ ಆವರಣದ ಹೊರಗೆ ವಿದ್ಯಾರ್ಥಿಗಳಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ.
ಇಂದು ಸಂಜೆ ವಿದ್ಯಾರ್ಥಿಗಳು ಶಾಲಾ ಆವರಣದಿಂದ ಹೊರಗೆ ಬರುತ್ತಿದ್ದಂತೆ ಹೊರಗಿನಿಂದ ಬಂದ ತಂಡ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ. ಅಲ್ಲದೆ ಹೆಲ್ಮೆಟ್ ನಿಂದ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಗಲಾಟೆ ಕಂಡು ಸ್ಥಳೀಯರು ನಗರ ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ಚದುರಿಸಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.