ಬಾಬಾ ಬುಡನ್ ಗಿರಿ ದತ್ತಪೀಠ: ದತ್ತ ಜಯಂತಿಗೆ ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು ನ.30 : ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತಪೀಠದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.

ಪ್ರಕರಣದ ಕುರಿತ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠವು ದತ್ತಪೀಠದಲ್ಲಿ ಡಿ. 6, 7 ಮತ್ತು 8 ರಂದು ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಿ ಆದೇಶಿಸಿದೆ.

ಈ ಬಗ್ಗೆ ಈಗಾಗಲೇ ನಿರ್ವಹಣಾ ಸಮಿತಿ ರಚಿಸಲಾಗಿದೆ. ಹಿಂದೂ-ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಆಗಿದೆ. ಪ್ರತಿ ದಿನ ಎರಡೂ ಸಮುದಾಯದವರೂ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ದತ್ತ ಜಯಂತಿ ಆಚರಣೆಗೆ ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿತ್ತು ಎಂಬುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!