ಮದುವೆ ಮನೆಯಲ್ಲಿ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು: ವೀಡಿಯೋ ವೈರಲ್

ಉತ್ತರಪ್ರದೇಶ ನ.30 : ಮದುವೆ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮನೋಜ್ ವಿಶ್ವಕರ್ಮ(40) ಎಂದು ಗುರುತಿಸಲಾಗಿದೆ.

ಇವರು ಪಿಲ್ಪಾನಿ ಕತ್ರಾ ಬಳಿ ಮದುವೆ ಸಮಾರಂಭದಲ್ಲಿ ಕುಟುಂಬ ಸದಸ್ಯರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಗಾಬರಿಗೊಂಡ ಜನ ಅವರುನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷೆ ನಡೆಸಿದ ವೈದ್ಯರು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ನವೆಂಬರ್ 25 ರಂದು ಈ ಘಟನೆ ನಡೆದಿದ್ದು, ಇದೀಗ ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

error: Content is protected !!