ಕರ್ತವ್ಯ ನಿರತ ಪೊಲೀಸ್ ಮುಖ್ಯಪೇದೆ ಮೃತ್ಯು

ಕೋಲಾರ ಡಿ.1 : ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಮುಖ್ಯಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಸುರೇಶ್ (48) ಮೃತ ಮುಖ್ಯಪೇದೆ.

ಇವರು ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಯದಲ್ಲಿ ಕರ್ತವ್ಯ ನಿರತರಾಗಿದ್ದರು. ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಇವರನ್ನು ಕೂಡಲೇ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸ್ಥಳಕ್ಕೆ ಕೆಜಿಎಫ್ ಎಸ್.ಪಿ ಧರಣಿದೇವಿ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!