ಕುಂದಾಪುರ: ಅಧಿಕ ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ ಡಿ.1 (ಉಡುಪಿ ಟೈಮ್ಸ್ ವರದಿ) : ಅನಾರೋಗ್ಯಕ್ಕಾಗಿ ನೀಡಿದ್ದ ಮಾತ್ರೆಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ವಡೇರಹೋಬಳಿ ಗ್ರಾಮದಲ್ಲಿ ನಡೆದಿದೆ.

ಆಲ್ವಿನ್ ಥೋಮಸ್ ಪಿಂಟೋ (60) ಮೃತಪಟ್ಟವರು.

ಇವರಿಗೆ ವಿಪರೀತ ಮಧ್ಯ ಸೇವನೆ ಮಾಡುವ ಅಭ್ಯಾಸವಿದ್ದು ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನ.29 ರಂದು ಅವರಿಗಿದ್ದ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯ ಮಾತ್ರೆಗಳನ್ನು ಸೇವಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಅವರನ್ನು ಮನೆಯವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರಾದರೂ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಮಗಳು ಆ್ಯಕ್ಲಿನ್ ಜೊಯೆಲ್ ಪಿಂಟೋ ಎಂಬವರು ನೀಡಿದ ಮಾಹಿತಿಯಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!