ಅನಾರೋಗ್ಯ-ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಡಿ.2 : ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದೆ ಮೂಲವ್ಯಾಧಿಗೆ ಚಿಕಿತ್ಸೆ ಪಡೆದಿದ್ದ ಜಾಗದಲ್ಲಿ ಸಣ್ಣ ಗುಳ್ಳೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹಾಗೂ ಮೈನರ್ ಅಪರೇಷನ್ ಬಳಿಕ ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮಾಧ್ಯಮ ವರದಿಯಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!