ಉಡುಪಿ ಜಿಲ್ಲೆಯಲ್ಲಿಯೂ ಮತದಾರರ ಹೆಸರಿಗೆ ಕತ್ತರಿ: ಚುನಾವಣೆ ಗೆಲ್ಲಲು ಪಿತೂರಿ- ಕೊಡವೂರು

ಉಡುಪಿ, ಡಿ.2: ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲುವ ಪಿತೂರಿ ಬಿಜೆಪಿಯಿಂದ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಒಟ್ಟು 12 ಲಕ್ಷ ಮತಗಳಲ್ಲಿ ಸುಮಾರು ಒಂದು ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಟಿಕೇಟ್ ಆಕಾಂಕ್ಷಿಗಳ, ಬ್ಲಾಕ್ ಅಧ್ಯಕ್ಷರ, ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು ಮತದಾರರ ಪರಿಷ್ಕರಣೆ ಸಮಯ ಒಂದೇ ಕುಟುಂಬದ ಮತದಾರ ರನ್ನು ವಿಂಗಡಿಸಿ ಅವರ ಮತದಾನದ ಕೇಂದ್ರವನ್ನು ಬದಲು ಮಾಡುವ ಪ್ರಕ್ರಿಯೆಯೂ ನಡೆಯುತ್ತಿದೆ. ಬಿಜೆಪಿಯ ಈ ಷಡ್ಯಂತ್ರವನ್ನು ನಾವು ಜನತೆಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು. ಹಾಗೂ ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವ ತಯಾರಿಯಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಎಲ್ಲಾ ಮುಖಂಡರು, ಕಾರ್ಯಕರ್ತರು ತೊಡಗಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.

ಈ ವೇಳೆ ಮಾಜಿ ಸಚಿವ, ಪಕ್ಷದ ಜಿಲ್ಲಾ ಉಸ್ತುವಾರಿ ಅಭಯಚಂದ್ರ ಜೈನ್ ಅವರು ಮಾತನಾಡಿ, ಚುನಾವಣೆ ಹತ್ತಿರ ಬರುವಾಗ ಕರಾವಳಿಯಲ್ಲಿ ಕೋಮು ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ. ಜನತೆ ಎಚ್ಚರದಿಂದ ಇರಬೇಕು. ಕೇವಲ ಭಾವನೆ ಕೆದಕುವುದರಿಂದ, ಕೋಮು ಗಲಭೆಗಳಿಂದ ಜನರ ಅಭಿವೃದ್ಧಿಯಾಗಲ್ಲ. ಬಿಜೆಪಿ ಮೂರು ಬಾರಿ ಆಡಳಿತ ನಡೆಸಿದರೂ ಜನರ ಬದುಕು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಜನರು ಜಿಎಸ್‍ಟಿ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆಗಳಿಂದ ತತ್ತರಿಸಿ ಹೋಗಿದ್ದಾರೆ. ಜನರ ಬದುಕು ಹಸನಾಗಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.

ಇದೇ ವೇಳೆ ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಫೂರ್ ಹಾಗೂ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ ಮತದಾರ ಪಟ್ಟಿಯ ಪರಿಷ್ಕರಣೆ ಸಮಯ ಸರಕಾರದಿಂದ ನಡೆದ ಷಡ್ಯಂತ್ರವನ್ನು ವಿವರಿಸಿ ಜಿಲ್ಲಾದ್ಯಂತ ಮತದಾರರ ಹೆಸರು ನೋಂದಾವಣೆ ಮತ್ತು ಪರಿಷ್ಕರಣೆ ಅಭಿಯಾನವನ್ನು ಹಮ್ಮಿಕೊಳ್ಳಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ನರಸಿಂಹ ಮೂರ್ತಿ, ನೀರೆ ಕೃಷ್ಣ ಶೆಟ್ಟಿ, ಶ್ಯಾಮಲಾ ಭಂಡಾರಿ, ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ನವೀನ್ಚಂದ್ರ ಸುವರ್ಣ, ಶಂಕರ ಕುಂದರ್, ಹರಿಪ್ರಸಾದ್ ಶೆಟ್ಟಿ, ಸದಾಶಿವ ದೇವಾಡಿಗ, ಸಂತೋಷ್ ಕುಲಾಲ್, ಮದನ್ ಕುಮಾರ್, ಪ್ರದೀಪ್ ಕುಮಾರ್, ರಮೇಶ್ ಕಾಂಚನ್ ಹಾಗೂ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಬೀಬ್ ಆಲಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರಾ, ಯತೀಶ ಕರ್ಕೇರ, ಅಮೃತ್ ಶೆಣೈ, ಶಶಿಧರ ಎಲ್ಲೂರು, ಜಯಕುಮಾರ್,ರೋಶನ್ ಶೆಟ್ಟಿ, ಕಿಶೋರ್ ಕುಮಾರ್ ಎರ್ಮಾಳ್, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಾಯಿರಾಜ್ ಕಿದಿಯೂರು, ಸಂಜಯ ಆಚಾರ್ಯ, ಪ್ರಖ್ಯಾತ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕುಶಲ್ ಶೆಟ್ಟಿ, ಅಣ್ಣಯ್ಯ ಸೇರಿಗಾರ್, ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!