ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ DeleteBJPNotVoterID ಅಭಿಯಾನ
ಬೆಂಗಳೂರು ಡಿ.2 : ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಮತ್ತೊಂದು ಹೊಸ ಅಭಿಯಾನ ಆರಂಭವಾಗಿದೆ.
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಇದೀಗ DeleteBJPNotVoterID ಅಭಿಯಾನ ಪ್ರಾರಂಭಿಸಲಾಗಿದೆ.
ಬಿಜೆಪಿ ಸರ್ಕಾರವು ದೇಶದ ಪ್ರಜಾಪ್ರಭುತ್ವವನ್ನು ಹಾಳುಮಾಡಲು ಪ್ರಯತ್ನಿಸಿದ ನಂತರ ಅವರ ಮತದಾರರ ಪಟ್ಟಿಯನ್ನು ಪರಿಶೀಲಿಸಲು ಜಾಗೃತಿ ಮೂಡಿಸಲು ಕಾಂಗ್ರೆಸ್ ವಾಟ್ಸಾಪ್ ಮೂಲಕ ಬೆಂಗಳೂರಿನಲ್ಲಿ 10 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಲಿದೆ. ಇದರ ಭಾಗವಾಗಿ ಈ ಅಭಿಯಾನ ಆರಂಭ ಮಾಡಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.