ಮಲ್ಪೆ ಬೀಚ್ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ ವರ್ಷಾಚರಣೆ ಸಂಭ್ರಮ: ವಿಂಚ್ ಪ್ಯಾರಾಸೈಲಿಂಗ್ ಬೋಟ್ ಉದ್ಘಾಟನೆ

ಮಲ್ಪೆ, ಡಿ.3 : ಮಲ್ಪೆ ಬೀಚ್ ಅನ್ವೆಂಚರ್ ವಾಟರ್ ಸ್ಪೋರ್ಟ್ಸ್ ನ ವರ್ಷಾಚರಣೆ ಸಂಭ್ರಮ ಕಾರ್ಯಕ್ರಮ ಹಾಗೂ 2ನೇ ವಿಂಚ್ ಪ್ಯಾರಾಸೈಲಿಂಗ್ ಬೋಟ್ ನ ಉದ್ಘಾಟನೆಯು ಇಂದು ಸಂಜೆ 4.30ಕ್ಕೆ ಮಲ್ಪೆ ಬೀಚ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್, ಶಾಸಕ ರಘುಪತಿ ಭಟ್, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‍ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅವರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಲ್ಪೆ-ಉಡುಪಿ ಭಾಗದ ಎಸ್.ಎಸ್.ಎಲ್.ಸಿ,ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಶಾಲೆಗೆ ಪೀಠೋಪಕರಣ ವಿತರಣೆ ಹಾಗೂ ಸ್ಥಳೀಯ ಯುವ ಸಾಧಕರಿಗೆ ಸಮ್ಮಾನ ಕಾರ್ಯಕ್ರಮವು ನಡೆಯಲಿದೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹೋಹ ಕಲ್ಮಾಡಿ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹಾಗೂ ನಾಮ ನಿರ್ದೆಶಿತ ಸದಸ್ಯ ವಿಜಯ ಕುಂದರ್, ಮಲ್ಪೆ ಸೆಂಟ್ರಲ್ ವಾರ್ಡ್‍ನ ನಗರಸಭಾ ಸದಸ್ಯೆ ಎಡ್ಲಿನ್ ಕರ್ಕಡ, ಕೊಡವೂರು ವಾಡ್9ನ ವಿಜಯ ಕೊಡವೂರು, ಕಲ್ಮಾಡಿ ವಾರ್ಡ್ ನ ಸುಂದರ್ ಜೆ. ಕಲ್ಮಾಡಿ, ಹಿಂದೂ ಯುವಸೇನೆಯ ಜಿಲ್ಲಾಧ್ಯಕ್ಷ ಮಂಜು ಕೊಳ, ಮಂತ್ರ ಟೂರಿಸಂ ಮತ್ತು ಮಲ್ಪೆ ಬೀಚ್ ನಿರ್ವಾಹಕರ ಆಡಳಿತ ನಿರ್ದೇಶಕ ಸುದೇಶ್ ಶೆಟ್ಟಿ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಮಾಜಿ ಅಧ್ಯಕ್ಷ ವಿನಯ ಕರ್ಕೇರ, ಕರಾವಳಿಯ ವಿವಿಧ ಭಜನ ಮಂದಿರಗಳ ಅಧ್ಯಕ್ಷರಾದ ವಿಕ್ರಮ್ ಟಿ. ಶ್ರೀಯಾನ್, ಜ್ಞಾನೇಶ್ವರ್ ಕೋಟ್ಯಾನ್, ದಯಾನಂದ ಕಾಂಚನ್, ಧನಂಜಯ್ ಸಾಲ್ಯಾನ್, ಕರುಣಾಕರ್ ಸಾಲ್ಯಾನ್, ಧನಂಜಯ ಕಾಂಚನ್ ಉಪಸ್ಥಿತರಿರಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!