ಕಾರ್ಕಳ: ಕಾಲೇಜ್ ವಿದ್ಯಾರ್ಥಿನಿ ನೇಣಿಗೆ ಶರಣು

ಕಾರ್ಕಳ, ಡಿ.3 : ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಆತ್ಮಹತ್ಯೆ ಮಾಡಿಕೊಂಡವರು.

ಕೀರ್ತನಾ ಅವರು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!