ಉಡುಪಿ: ಬಟ್ಟೆ ಹೊಲಿಯಲು ಕೊಡಲು ಹೋದ ಯುವತಿ ನಾಪತ್ತೆ

ಉಡುಪಿ ಡಿ.3(ಉಡುಪಿ ಟೈಮ್ಸ್ ವರದಿ): ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ಮನೆಯಿಂದ ಹೋದ ಯುವತಿ ಮನೆಗೆ ವಾಪಸ್ಸು ಬಾದರೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬಡಗುಬೆಟ್ಟುವಿನ ಇಂದಿರಾ ನಗರದಲ್ಲಿ ನಡೆದಿದೆ.

ನಿಖಿತಾ (18 ) ನಾಪತ್ತೆಯಾಗಿರುವವರು.

ಇವರು ನ.28 ರಂದು ಉಡುಪಿಯ ಬಡಗುಬೆಟ್ಟು ಗ್ರಾಮದ ಇಂದಿರಾ ನಗರದಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದರು. ಬಳಿಕ ಬೆಳಿಗ್ಗೆ 10:30 ರ ಸುಮಾರಿಗೆ ಬಟ್ಟೆ ಹೊಲಿಯಲು ಕೊಟ್ಟು ಬರುವುದಾಗಿ ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಇವರ ಬಗ್ಗೆ ಸಂಬಂಧಿಕರ ಮನೆಯಲ್ಲಿ ಎಲ್ಲಾ ಕಡೆ ಹುಡುಕಾಡಿದರೂ ಈ ವರೆಗೆ ಪತ್ತೆಯಾಗಿರುವುದಿಲ್ಲ ಎಂಬುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!