ಕಾರ್ಕಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ ಡಿ.3 (ಉಡುಪಿ ಟೈಮ್ಸ್ ವರದಿ): ತಾಲೂಕಿನ ಮಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೃಷ್ಣ ಶೆಟ್ಟಿ (65) ಆತ್ಮಹತ್ಯೆ ಮಾಡಿಕೊಂಡವರು.

ಕಾರ್ಕಳ ತಾಲೂಕಿನ ಮಾಳದಲ್ಲಿ ತಮ್ಮ ಪತ್ನಿ, ಮಗ ಹಾಗೂ ಸೊಸೆಯ ಜೊತೆಯಲ್ಲಿ ವಾಸ ಮಾಡಿಕೊಂಡಿದ್ದವರು ತಮ್ಮ ವೈಯಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮನ ನೊಂದು, ಜೀವನದಲ್ಲಿ ಜುಗುಪ್ಸೆಗೊಂಡು ಡಿ.2 ರಂದು ಸಂಜೆ ವೇಳೆ ತಮ್ಮ ವಾಸ್ತವ್ಯದ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರಿಗೆ ಕಾರ್ಕಳದ ನರ್ಸಿಂಗ್ ಹೋಂ ನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಿದ್ದು, ಅಲ್ಲಿ ಕೃಷ್ಣ ಶೆಟ್ಟಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಮಗ ನೀಡಿದ ಮಾಹಿತಿಯಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!