ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘಾತ ಆಸ್ಪತ್ರೆ ದಾಖಲು
ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಯೊಂದು ವರದಿ ಮಾಡಿದೆ.
ಗಂಗೋಲಿ ಅವರ ಆಪ್ತ ಮೂಲಗಳು ನೀಡಿರುವ ಮಾಹಿತಿ ಪ್ರಕಾರ,ಎದೆನೋವು ಕಾಣಿಸಿಕೊಂಡ ಹಿನ್ನಲೆ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದ್ದು ಸದ್ಯ, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.