ಉಡುಪಿ: ಕೆಮ್ತೂರು ಯುವಕ ಆತ್ಮಹತ್ಯೆ

ಉಡುಪಿ, ಡಿ.5 (ಉಡುಪಿ ಟೈಮ್ಸ್ ವರದಿ) : ನಗರ ಪೋಲಿಸ್ ಠಾಣೆಯ ವ್ಯಾಪ್ತಿಯ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಅಶೋಕ್ ನಾಯ್ಕ (34) ಆತ್ಮಹತ್ಯೆ ಮಾಡಿಕೊಂಡವರು

ಮನೆಯಲ್ಲಿ ನೇಣುಕುಣಿಕೆಯಲ್ಲಿ ನೇಲುತ್ತಿದ್ದ ಅಶೋಕ್ ಅವರನ್ನು ತಕ್ಷಣ ಕುಣಿಕೆಯಿಂದ ಇಳಿಸಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದೊಂದಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅಶೋಕ್ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!