ಕಾರ್ಕಳ ತಾ.ಪಂಚಾಯತ್ ಕಚೇರಿ ಉದ್ಘಾಟನಾ ವೇದಿಕೆಯಲ್ಲಿ ಹಿಂದಿ ಹಾಡಿಗೆ ನೃತ್ಯ- ವ್ಯಾಪಕ ಆಕ್ರೋಶ

ಕಾರ್ಕಳ ಡಿ.5 (ಉಡುಪಿ ಟೈಮ್ಸ್ ವರದಿ): ತಾಲೂಕು ಪಂಚಾಯತ್ ನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಅಯೋಜಿಸಿದ ಮನೋರಂಜನಾ ಕಾರ್ಯಕ್ರಮದಲ್ಲಿ ಹಿಂದಿ ಗೀತೆಯೊಂದಕ್ಕೆ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಯರು ಲಿಂಗಬೇಧ ಮರೆತು ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ ವೀಡಿಯೋ ವೊಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಹಿಂದಿ ಚಿತ್ರದ ಹವಾ.. ಹವಾ.. ಹಾಡಿಗೆ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಲಿಂಗ ಬೇಧ ಮರೆತು ಹೆಜ್ಜೆ ಹಾಕಿದ್ದಾರೆ. ಇದೀಗ ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮದಲ್ಲಿ ಹಿಂದಿ ಚಿತ್ರದ ಹಾಡಿಗೆ ಅಧಿಕಾರಿಗಳು ಹೆಜ್ಜೆ ಹಾಕಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸರಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಸರಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯ ಬಳಕೆ ಮಾಡಬೇಕೆಂಬ ನಿಯಾಮಗಳು ಇದ್ದರೂ ಈ ನಿಯಮಗಳು ಕಡತದಲ್ಲಿ ಮಾತ್ರ ಉಳಿದುಕೊಂಡಿದ್ದು ಕಾರ್ಯರೂಪಕ್ಕೆ ತರುವಲ್ಲಿ ಇನ್ನೂ ಸಾಧ್ಯವಾಗಿಲ್ಲ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಬಳಕೆ ಬರೀ ಮಾತಿಗಷ್ಟೇ ಸೀಮಿತವಾಯಿತಾ ಎಂದು ಪ್ರಶ್ನಿಸಿ ಕಾರ್ಯಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಶನಿವಾರ ನಡೆದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕಾರ್ಯಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು ಮೇಲಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!