ಉಡುಪಿ: ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ
ಉಡುಪಿ(ಉಡುಪಿ ಟೈಮ್ಸ್ ವರದಿ): ಎಂಜಿಎಂ ಕಾಲೇಜಿನ ಮೈದಾನದಲ್ಲಿ ವ್ಯಕ್ತಿಯೊಬ್ಬರು ಮೈ ಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ರಾತ್ರಿ 9 ಗಂಟೆಗೆ ವೇಳೆಗೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಉಡುಪಿ ನಗರದ ಬಡಗುಪೇಟೆಯ ಉಡುಪ ಕಾಂಪೌಂಡ್ ವಿಶ್ವಾಸ್ ಪ್ರೈಡ್ ವಸತಿ ಸಮುಚ್ಛಯದ ನಿವಾಸಿ ಶ್ರೀವಾತ್ಸವ (21) ಎಂದು ಗುರುತಿಸಲಾಗಿದೆ.
ವೈಯಕ್ತಿಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಪೆಟ್ರೋಲ್ ಕ್ಯಾನ್ ಪತ್ತೆಯಾಗಿದೆ.
ಮಾಹಿತಿ ತಿಳಿದ ಅಗ್ನಿಶಾಮಕದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಗಾಯಾಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಯಿಸಲಾಯಿತು. ವ್ಯಕ್ತಿ ಗಂಭೀರವಾಗಿರುವ ಕಾರಣಕ್ಕೆ ಮಣಿಪಾಲ ಖಾಸಗಿ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬರುತ್ತಿದ್ದೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ..