ಬೈಂದೂರು:ಕಾರು ಡಿಕ್ಕಿ, ಪಾದಚಾರಿ ಸಾವು
ಬೈಂದೂರು: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬೈಂದೂರು ಸಮೀಪದ ನಾಗೂರು ನಿವಾಸಿ ಬುದ್ದಿವಂತ ನಾಯರಿ (60) ಮೃತಪಟ್ಟ ವ್ಯಕ್ತಿ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.