ಗುಜರಾತ್‍ನಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿಯೇ ಎಎಪಿಗೆ ಫಂಡ್ ನೀಡಿದೆ- ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿ.8 : ಕಾಂಗ್ರೆಸ್ ಸೋಲಿಸಲು ಗುಜರಾತ್ ನಲ್ಲಿ ಆಮ್ ಆದ್ಮಿ ಪಾರ್ಟಿಗೆ ಬಿಜೆಪಿಯೇ ಫಂಡ್ ಮಾಡಿದೆ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಗುಜರಾತ್ ವಿಧಾನಸಭೆ ಚುಣಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗುಜರಾತ್ ಚುನಾವಣೆಯ ಫಲಿತಾಂಶ ಕರ್ನಾಟಕದ ಚುನಾವಣೆಯ ಮೇಲೆ ಪರಿಣಾಮ ಬೀರಲ್ಲ. ಅಲ್ಲಿನ ವಾತವರಣವೇ ಬೇರೆ ಇಲ್ಲಿನ ವಾತವಾರಣವೇ ಬೇರೆ. ಇಲ್ಲಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿರೋಧ ಪಕ್ಷವೂ ತುಂಬಾ ಸ್ಟ್ರಾಂಗ್ ಆಗಿದೆ. ಹೀಗಾಗಿ ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ. ಹಾಗೂ ಗುಜರಾತ್ ನಲ್ಲಿ ಮತ ವಿಭಜನೆಯಿಂದ ಬಿಜೆಪಿ ಮುನ್ನಡೆ ಸಾಧಿಸಿದೆ. ಮಾತ್ರವಲ್ಲದೆ ಆಮ್ ಆದ್ಮಿ ಪಾರ್ಟಿಗೆ ಬಿಜೆಪಿಯೇ ಫಂಡ್ ಮಾಡಿದೆ ಎಂದು ಆರೋಪಿಸಿದ್ದಾರೆ.