ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೌಲಾನಾ ಆಝಾದ್ ಫೆಲೋಶಿಪ್ ಸ್ಥಗಿತ: ಕೇಂದ್ರ ಸರಕಾರ
ಹೊಸದಿಲ್ಲಿ ಡಿ.9 : ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೌಲಾನಾ ಆಜಾದ್ ನ್ಯಾಷನಲ್ ಫೆಲೋಶಿಪ್ ಅನ್ನು 2022-23 ರಿಂದ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಲೋಕಸಭೆಯಲ್ಲಿ ತಮಿಳುನಾಡಿನ ಸಂಸದ ಪ್ರತಾಪನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ವರು, “ಎಂ.ಎ.ಎನ್.ಎಫ್ ಯೋಜನೆಯನ್ನು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ಜಾರಿಗೊಳಿಸುತ್ತದೆ. ಯುಜಿಸಿ ಒದಗಿಸಿದ ಮಾಹಿತಿಯ ಪ್ರಕಾರ, 2014-15 ಮತ್ತು 2021-22 ರ ನಡುವೆ 6,722 ಅಭ್ಯರ್ಥಿಗಳನ್ನು ಯೋಜನೆಯಡಿ ಆಯ್ಕೆ ಮಾಡಿ, 738.85 ಕೋಟಿಗಳ ಫೆಲೋಶಿಪ್‍ಗಳನ್ನು ಅದೇ ಅವಧಿಯಲ್ಲಿ ವಿತರಿಸಲಾಗಿದೆ.” ಎಂದು ತಿಳಿಸಿದ್ದಾರೆ.
“ಕೇಂದ್ರ ಸರ್ಕಾರ ಜಾರಿಗೊಳಿಸುವ ವಿವಿಧ ಫೆಲೋಶಿಪ್‍ಗಳಡಿಯಲ್ಲಿ ಅಲ್ಪಸಂಖ್ಯಾತರ ವಿಭಾಗಗಳ ವಿದ್ಯಾರ್ಥಿಗಳಿಗೂ ಅವಕಾಶವಿದೆ, ಹಾಗಾಗಿ ಎಂಎಎನ್‍ಎಫ್ ಯೋಜನೆಯಡಿಯಲ್ಲಿ ಬರುವ ಫೆಲೋಶಿಪ್ ಗಳು 2022-23 ನೇ ಶೈಕ್ಷಣಿಕ ವರ್ಷದಿಂದ ಮುಂದುವರಿಯುವುದಿಲ್ಲ” ಎಂದು ಹೇಳಿದ್ದಾರೆ.