ಸಾಗರ: ಕರ್ತವ್ಯ ನಿರತ ಛಾಯಾಗ್ರಾಹಕ ಕುಸಿದು ಬಿದ್ದು ಮೃತ್ಯು
ಸಾಗರ, ಡಿ.12 : ಕಾರ್ಯಕ್ರಮವೊಂದರಲ್ಲಿ ಫೋಟೋ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಛಾಯಾಗ್ರಾಹಕನೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನಲ್ಲಿ ನಡೆದಿದೆ.
ರಾಮನಗರದ ನಿವಾಸಿ ಚಂದ್ರು (42) ಮೃತ ಪಟ್ಟ ಛಾಯಾಗ್ರಾಹಕ
ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ನಿನ್ನೆ ಸಂಜೆ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಫೋಟೋ ತೆಗೆಯುವ ವೇಳೆ ಚಂದ್ರು ಅವರು ಕುಸಿದು ಬಿದ್ದಿದ್ದಾರೆನ್ನಲಾಗಿದ್ದು, ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಶಿಲ್ಪ ಸ್ಟುಡಿಯೋ ಮಾಲಕರಾಗಿದ್ದ ಚಂದ್ರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.