ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು, ಡಿ.12 : ಲವ್ ಜಿಹಾದ್ ತಡೆಗೆ ಆಗ್ರಹಿಸಿ ಹಿಂದುತ್ವ ಸಂಘಟನೆಗಳ ನಿಯೋಗವು ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ದೂರು ಸಲ್ಲಿಸಿದೆ.

ಜಯಮಹಲ್ ರಸ್ತೆಯಲ್ಲಿರುವ ಗೃಹ ಸಚಿವರ ಅಧಿಕೃತ ನಿವಾಸಕ್ಕೆ ನಿನ್ನೆ ತೆರಳಿದ ಹಿಂದುತ್ವ ಸಂಘಟನೆಗಳ ನಿಯೋಗವು ಲವ್ ಜಿಹಾದ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಂಘಪರಿವಾರದ ಕಾರ್ಯಕರ್ತರು, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದರೂ ಲವ್ ಜಿಹಾದ್ ಅವ್ಯಾಹತವಾಗಿ ಮುಂದುವರಿದಿದೆ. ಹೀಗಾಗಿ, ಉತ್ತರಪ್ರದೇಶ ಮಾದರಿಯಲ್ಲಿ ಲವ್ ಜಿಹಾದ್ ವಿರೋಧಿ ವಿಶೇಷ ದಳ ರಚಿಸಬೇಕೆಂದು ಆಗ್ರಹಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ರಾಜ್ಯದಲ್ಲಿ `ಲವ್ ಜಿಹಾದ್’ ತಡೆಗೆ ವಿಶೇಷ ಪೊಲೀಸ್ ದಳ ರಚಿಸುವ ಕುರಿತಾಗಿ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!