ಹೈಕೋರ್ಟ್, ಅಧೀನ ನ್ಯಾಯಾಲಯ, ಅಧಿಕಾರಿಗಳ 4ನೇ ಶನಿವಾರ ಸಾರ್ವತ್ರಿಕ ರಜೆ ರದ್ದು: ರಾಜ್ಯ ಸರಕಾರ

ಬೆಂಗಳೂರು, ಡಿ.14 : ರಾಜ್ಯ ಸರಕಾರವು ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ 2019 ರಲ್ಲಿ ಘೋಷಿಸಿದ ಪ್ರತಿ ತಿಂಗಳ 4ನೆ ಶನಿವಾರದ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸಿದೆ.

ರಾಜ್ಯ ಸರಕಾರವು 2019ರ ಜೂ.13 ರಂದು ತಕ್ಷಣದಿಂದ ಜಾರಿಗೆ ಬರುವಂತೆ ಹೈಕೋರ್ಟ್ ಸೇರಿದಂತೆ ಅಧೀನ ನ್ಯಾಯಾಲಯಗಳಿಗೆ ಪ್ರತಿ ತಿಂಗಳ ನಾಲ್ಕನೆ ಶನಿವಾರವನ್ನು ಸಹ ಸಾರ್ವತ್ರಿಕ ರಜೆ ಎಂದು ಘೋಷಿಸಿತ್ತು. ಇದೀಗ ಈ ಅಧಿಸೂಚನೆಯನ್ನು ಮಾರ್ಪಡಿಸಿ, ಹೈಕೋರ್ಟ್ ಹಾಗೂ ಎಲ್ಲಾ ಅಧೀನ ನ್ಯಾಯಾಲಯ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ಪ್ರಾಸಿಕ್ಯೂಟರ್ ಗಳು, ಸರಕಾರಿ ವಕೀಲರು ಹಾಗೂ ಸದರಿ ನ್ಯಾಯಾಲಯಗಳಲ್ಲಿನ ಪ್ರಕರಣಗಳಿಗೆ ಸಮನ್ವಯಿಸಲು ಹಾಗೂ ನ್ಯಾಯಾಲಯಗಳ ಪ್ರಕರಣಳಿಗೆ ಹಾಜರಾಗುವ ಸರಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ನಾಲ್ಕನೆ ಶನಿವಾರದ ರಜೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿ ಆದೇಶಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!