ವಿಜಯಪುರ: ಇಬ್ಬರು ಕಂದಮ್ಮಗಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ವಿಜಯಪುರ, ಡಿ.14: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ತಾಯಿಯೊಬ್ಬರು ಇಬ್ಬರು ಹೆಣ್ಣು ಪುಟ್ಟ ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ

ರೇಣುಕಾ ಅಮೀನಪ್ಪ ಕೋನಿನ್ (26 ) ಹಾಗೂ ಅವರ ಮಕ್ಕಳಾದ ಯಲ್ಲವ್ವ (2) ಅಮೃತಾ (1) ಮೃತಪಟ್ಟವರು.

ಗ್ರಾಮದ ಹೊರ ಭಾಗದಲ್ಲಿರುವ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಹೆಣ್ಣು ಮಗುವಿನ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!