ಜ.15ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ: ಸಿದ್ದರಾಮಯ್ಯ

ಬೆಂಗಳೂರು, ಡಿ.15 : ಜನವರಿ 15ರೊಳಗೆ ಮುಂದಿನ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಬಗ್ಗೆ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, “ಚುನಾವಣಾ ಸಿದ್ಧತೆಗಾಗಿ ಮುಂದಿನ 75 ದಿನಗಳಲ್ಲಿ ಪಕ್ಷ ಏನೇನು ಮಾಡಬೇಕು ಎಂಬುದರ ಕುರಿತು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿದ್ದೇವೆ. ಅದರಂತೆ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯೂ ಬಿಡುಗಡೆಗೊಳಿಸಲಾಗುವುದು” ಎಂದರು.

“ಕಾಂಗ್ರೆಸ್ ನಾಯಕರು ಜಂಟಿಯಾಗಿ ಪ್ರವಾಸ ಮಾಡಿ, ಬಿಜೆಪಿ ಸರ್ಕಾರದ ದುರಾಡಳಿತದ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಿದ್ದೆ?ವೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ನನ್ನ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಿ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಜನವರಿಯಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗುತ್ತಿದೆ. 224 ಕ್ಷೇತ್ರದಲ್ಲಿ ಒಮ್ಮೆಲೇ ಸಂಚಾರ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಬೇರೆ ಬೇರೆ ತಂಡ ಮಾಡಿ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಸರ್ಕಾರದ ಜನ ವಿರೋಧಿ ನೀತಿಗಳ ಕುರಿತು ಮತದಾರರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಲಾಗುವುದು” ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!