ಬಿಜೆಪಿಯ ಹಗರಣಗಳಿಂದ ಜನತೆ ರೋಸಿ ಹೋಗಿದ್ದಾರೆ : ರೋಝಿ ಜೋನ್

ಉಡುಪಿ ಡಿ.20 (ಉಡುಪಿ ಟೈಮ್ಸ್ ವರದಿ): ಕರ್ನಾಟಕದ ಮತದಾರರು ಬಿಜೆಪಿಯ ಭ್ರಷ್ಟಾಚಾರ ಹಾಗೂ ಹಗರಣಗಳಿಂದ ರೋಸಿ ಹೋಗಿ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವನ್ನು ವ್ಯಕ್ತಪಡಿಸಿದ್ದಾರೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿ ರೋಝಿ ಜಾನ್ ಅವರು ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರವಾರು ಪಕ್ಷ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಮೂಲದಿಂದ ಈಗಾಗಲೇ ಹಲವು ಬಾರಿ ಜನಾಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಈಗಾಗಲೇ ಕರ್ನಾಟಕದ ಮತದಾರರು ಬಿಜೆಪಿಯ ಭ್ರಷ್ಟಾಚಾರ ಹಾಗೂ ಹಗರಣಗಳಿಂದ ರೋಸಿ ಹೋಗಿ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವನ್ನು ವ್ಯಕ್ತಪಡಿಸಿದ್ದಾರೆ. ಪಕ್ಷದಿಂದ ಸೂಕ್ತ ಸಮಯದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು. ಯಾರಿಗೂ ಸ್ವರ್ಧೆಗೆ ಅವಕಾಶ ನೀಡಿದರೂ ಎಲ್ಲರೂ ಒಮ್ಮತದಿಂದ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಧ್ರುವನಾರಾಯಣ ಅವರು, ರಾಜ್ಯದಲ್ಲಿ 30 ಲಕ್ಷ ಮತದಾರರನ್ನು ಡಿಲಿಷನ್ ಮಾಡಲಾಗಿದೆ. ಇದರ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದು, ಸರಕಾರ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದರಿಂದ ಸರಕಾರದ ಷಡ್ಯಂತ್ರ ಬಯಲುಗೊಂಡಿದೆ ಎಂದರು.

ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ, ತನ್ನ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಮಾಡುವಲ್ಲಿ ವೈಫಲ್ಯ ಕಂಡ ಬಿಜೆಪಿ ಈಗ ಕ್ಷುಲ್ಲಕ ವಿಷಯಗಳನ್ನು ಹಿಡಿದುಕೊಂಡು ಕಾಂಗ್ರೆಸ್ ಪಕ್ಷದ ನಾಯಕರ ತೇಜೋವಧೆಗೆ ಹೊರಟಿದೆ, ಇಂತಹ ಕೆಟ್ಟ ಹಾಗೂ ನೀಚ ಸರಕಾರ ಎಲ್ಲೂ ಕಾಣಸಿಗದು ಎಂದರು.

ಇದೇ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು, ಎಲ್ಲಾ ಬೂತುಗಳಲ್ಲಿ ಬಿ.ಎಲ್.ಎ2 ಆಗುವಂತೆ ನಿಗಾವಹಿಸಬೇಕು. ಮತ್ತು ಎಲ್ಲಾ ವರ್ಗಗಳ ಮತ ಪಕ್ಷಕ್ಕೆ ಬರುವಂತೆ ಕಾರ್ಯಾಯೋಜನೆ ರೂಪಿಸಬೇಕು ಎಂದರು.

ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಮಾತನಾಡಿ, ಯುಪಿಎ ಸರಕಾರದ ಅವಧಿಯಲ್ಲಿ ಅತ್ಯಲ್ಪ ಬೆಲೆ ಏರಿಕೆ ಪ್ರಕಟಗೊಂಡಾಗ ಬಿಜೆಪಿ ರಸ್ತೆಗಿಳಿದು ಪ್ರತಿಭಟಿಸುತ್ತಿತ್ತು. ಆದರೆ ಈಗ ಬೆಲೆ ಗಗನಕ್ಕೇರಿದರೂ ಅದು ಅಭಿವೃದ್ಧಿಗಾಗಿ ಎನ್ನುವ ಹೇಳಿಕೆಗಳಿಂದ ಜನರನ್ನು ಮೂರ್ಖರನ್ನಾಗಿಸುತ್ತಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಡಬ್ಬಲ್ ಇಂಜಿನ್ ಸರಕಾರವಿದ್ದರೂ ರಾಜ್ಯ ಸರಕಾರ ಕೇಂದ್ರದಿಂದ ಅನುದಾನವನ್ನು ತರುವಲ್ಲಿ ವಿಫಲವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಭೆಯಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಎಮ್.ಎ.ಗಫೂರ್, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು, ಪಕ್ಷದ ಮುಖಂಡರಾದ ಮಿಥುನ್ ರೈ, ಶಂಕರ್ ಕುಂದರ್, ದೀಪಕ್ ಕೋಟ್ಯಾನ್, ಸೌರಭ ಬಲ್ಲಾಳ್, ರೋಶನ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಪ್ರಸಾದ್ ಕಾಂಚನ್, ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಹರೀಶ್ ಕಿಣಿ, ಹಬೀಬ್ ಆಲಿ, ಮುರಲಿ ಶೆಟ್ಟಿ, ಕುಶಲ ಶೆಟ್ಟಿ, ಸಂತೋಷ್ ಕುಲಾಲ್, ಪ್ರಖ್ಯಾತ್ ಶೆಟ್ಟಿ, ಶಬ್ಬಿರ್ ಅಹ್ಮದ್, ಅಮೃತ್ ಶೆಣೈ, ಕೀರ್ತಿ ಶೆಟ್ಟಿ, ಮಾರ್ಮಡಿ ಸುಧಾಕರ ಶೆಟ್ಟಿ, ದಿವಾಕರ ಕುಂದರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜ್ಯೋತಿ ಹೆಬ್ಬಾರ್, ಮಮತಾ ಶೆಟ್ಟಿ, ಡಾ| ಸುನೀತಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಹಮೀದ್, ಯತೀಶ್ ಕರ್ಕೇರ, ವಿಜಯ ಪೂಜಾರಿ, ಶ್ರೀನಿವಾಸ ಹೆಬ್ಬಾರ್, ಉದ್ಯಾವರ ನಾಗೇಶ್ ಕುಮಾರ್, ಸಂಜಯ ಆಚಾರ್ಯ, ಸುರೇಶ್ ಶೆಟ್ಟಿ ಬನ್ನಂಜೆ, ಉಪೇಂದ್ರ, ಗಣೇಶ್ ದೇವಾಡಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!