ಬೈಂದೂರು: ಲಾರಿ ಕಾರು ಮುಖಾ-ಮುಖಿ, ಲಾರಿ ಚಾಲಕ ಸ್ಥಳದಲ್ಲೇ ಸಾವು
ಬೈಂದೂರು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಲಾರಿ ಚಾಲಕ ಸಾವನ್ನಪ್ಪಿದ ಘಟನೆ ನಿನ್ನೆ (ಜ.10 ) ಬೈಂದೂರು ಸಮೀಪದ ಒತ್ತಿನೆಣೆ ಬಳಿ ನಡೆದಿದೆ.
ರಾಮ್ಪ್ರಸಾದ್ ಪವಾರ್ (35) ಅಪಘಾತದಲ್ಲಿ ಮೃತ ಪಟ್ಟ ಲಾರಿ ಚಾಲಕ. ಶಿರೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಎದುರುಗಡೆಯಿಂದ ಶಿರೂರು ಕಡೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಗಂಭೀರಗಾಯಗೊಂಡ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯಲ್ಲಿದ್ದ ಮತ್ತೋರ್ವರು ಗಾಯಗೊಂಡಿದ್ದು, ಕಾರಿನಲ್ಲಿದ್ದವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಅಪಾರ ಹಾನಿಗೊಳಗಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.