ಬ್ರಹ್ಮಾವರ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ
ಬ್ರಹ್ಮಾವರ ಡಿ.20 (ಉಡುಪಿ ಟೈಮ್ಸ್ ವರದಿ): ಬಾವಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಎಂಬಲ್ಲಿ ನಡೆದಿದೆ.
ಪ್ರಿಯಾಂಕ (26) ಆತ್ಮಹತ್ಯೆ ಮಾಡಿಕೊಂಡವರು.
ಇವರು ಸುಮಾರು 10-11 ವರ್ಷಗಳಿಂದ ಮಾನಸಿಕ ಖಿನ್ನತೆಯ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಡಿ.19 ರಂದು ರಾತ್ರಿ ವೇಳೆ ತನ್ನ ಸ್ನೇಹಿತೆ ಸುಲತಾ ಎಂಬರೊಂದಿಗೆ ಮೊಬೈಲ್‍ನಲ್ಲಿ ಮಾತನಾಡುತ್ತಾ ಮನೆಯ ಅಂಗಳಕ್ಕೆ ಬಂದವರು, ಮನೆಯ ಬಾವಿಯ ನೀರಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಇವರು ತಮಗಿರುವ ಮಾನಸಿಕ ಖಿನ್ನತೆಯ ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನನೊಂದು ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಂದೆ ರಘುರಾಮ ಶೆಟ್ಟಿ ಎಂಬವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.