ಬೋಟ್ನಲ್ಲಿ ಸಿಲಿಂಡರ್ ಸ್ಪೋಟ – 11 ಮೀನುಗಾರರ ರಕ್ಷಣೆ
ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ಬೋಟ್ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಘಟನೆ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲ್ ದೂರದಲ್ಲಿ ನಡೆದಿದೆ. ಬೋಟ್ ನಲ್ಲಿದ್ದ 11 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ.
ಬೋಟ್ನಲ್ಲಿದ್ದ 11 ಮಂದಿ ಮೀನುಗಾರರ ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಬೋಟ್ನಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿದೆ. ಈ ಬಗ್ಗೆ ಷಯ ತಿಳಿದ ತಕ್ಷಣ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿಗಳು ಸಾಚೇತ್ ಹಾಗೂ ಸುಜಿತ್ ಎಂಬ ರಕ್ಷಣಾ ಪಡೆಯ ಬೋಟ್ನಲ್ಲಿ ಸ್ಥಳಕ್ಕೆ ತೆರಳಿ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿ ದ್ದಾರೆ