ಕೋವಿಡ್ ಸೋಂಕು ಭೀತಿ: ಸಿಎಂ ನೃತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಬೆಂಗಳೂರು ಡಿ.22 : ಚೀನಾ ಸೇರಿದಂತೆ ವಿದೇಶಗಳಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಸೋಂಕು ವ್ಯಾಪಿಸುವ ಆತಂಕ ಇರುವುದರಿಂದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ಎಲ್ಲಾ ರಾಜ್ಯಗಳ ಆರೋಗ್ಯಾಧಿಕಾರಿಗಳು ಹಾಗೂ ತಾಂತ್ರಿಕ ಸಮತಿ ಸದಸ್ಯರೊಂದಿಗೆ ಸಭೆ ಕರೆದಿದ್ದಾರೆ. ಅವರು ನೀಡುವ ಸಲಹೆ ಸೂಚನೆ- ನಿರ್ದೇಶನಗಳ ಆಧಾರದ ಮೇಲೆ ನಮ್ಮ ಸರ್ಕಾರ ಎಲ್ಲಾ ಶಿಫಾರಸು ಹಾಗೂ ಮಾರ್ಗಸೂಚಿನಗಳನ್ನು ಅನುಸರಿಸುತ್ತದೆ ಎಂದು ಹೇಳಿದ್ದಾರೆ.

ಹಾಗೂ ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಸೋಂಕನ್ನು ಯಾವ ರೀತಿ ನಿಯಂತ್ರಣ ಮಾಡಬೇಕು. ರಾಜ್ಯದಲ್ಲಿ ಯಾವ ರೀತಿಯ ಟೆಸ್ಟ್ ಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಕುರಿತು ಚರ್ಚಿಸಲು ಇಂದು ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆಯನ್ನು ಜನ ತಡೆಗಟ್ಟುವ ಕ್ರಮಗಳ ಕುರಿತು ವಿಸೃತವಾಗಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!