ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ನಲ್ಲಿ ವೃತ್ತಿಮಾರ್ಗದರ್ಶನ ಕಾರ್ಯಕ್ರಮ
ಬ್ರಹ್ಮಾವರ ಡಿ.22 (ಉಡುಪಿ ಟೈಮ್ಸ್ ವರದಿ) : ನವ್ಯಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್ ವತಿಯಿಂದ ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ನಲ್ಲಿ ವೃತ್ತಿಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಈ ವೇಳೆ ಬೆಂಗಳೂರಿನ ಚಾಣ್ಯಕ ವಿಶ್ವವಿದ್ಯಾನಿಲಯದ ಸಂಪನ್ಮೂಲ ವ್ಯಕ್ತಿ ರಾಜೇಶ್ ಕೆ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿ, ಉತ್ಸಾಹ, ಆಸಕ್ತಿ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ಮಾಡಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಶಿವಾನಂದ ನಾಯಕ್ ಅವರು ಮಾತನಾಡಿ, ಶಿಕ್ಷಣ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಟ್ರಸ್ಟ್ ಮಾಡುತ್ತಾ ಬಂದಿದೆ. ಆ ನಿಟ್ಟಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಸುಮಾರು 150 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜವನ್ನು ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪ ಪ್ರಾಶುಪಾಲರಾದ ಹರಿಕೃಷ್ಣ ಡಿ., ಕಾಲೇಜಿನ ಶಿಕ್ಷಕ ವೃಂದ ಹಾಗೂ ಸುಮುಖ್ ಭಟ್ ಉಪಸ್ಥಿತರಿದ್ದರು.