ರಂಗಸ್ಥಳದಲ್ಲೇ ಕುಸಿದು ಕಟೀಲು ಮೇಳದ ಕಲಾವಿದ ನಿಧನ

ಮಂಗಳೂರು, ಡಿ.23: ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ಅವರು ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗುರುವಪ್ಪ ಬಾಯಾರು (58) ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದರಾಗಿದ್ದರು.

ನಿನ್ನೆ ರಾತ್ರಿ ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಗುರುವಪ್ಪ ಬಾಯರು ಶಿಶುಪಾಲನ ಪಾತ್ರಧಾರಿಯಾಗಿ ಪಾತ್ರ ನಿರ್ವಹಿಸುತ್ತಿದ್ದರು. ಪ್ರಸಂಗದ ಕೊನೆ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಇನ್ನೊಬ್ಬರು ಪಾತ್ರಧಾರಿ ಯಕ್ಷಗಾನದ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರು ಹೃದಾಯಾಘಾತವಾಗಿ ರಂಗಸ್ಥಳದಿಂದ ಕೆಳಗಡೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!