ಕುಂದಾಪುರ: ಅನಾರೋಗ್ಯ ಕಾರಣ-ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಕುಂದಾಪುರ ಡಿ.23 (ಉಡುಪಿ ಟೈಮ್ಸ್ ವರದಿ) : ತಮಗಿದ್ದ ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಶ್ವರ ಗ್ರಾಮದ ಮೇಪು, ಬುಕ್ಕನಬೈಲು ಎಂಬಲ್ಲಿ ನಡೆದಿದೆ.
ಕೋಟೆಶ್ವರ ಗ್ರಾಮದ ತಿಮ್ಮಪ್ಪ ಶೇರಿಗಾರ್ (75) ಆತ್ಮಹತ್ಯೆ ಮಾಡಿಕೊಂಡವರು.
ಇವರು ಸುಮಾರು 15 ವರ್ಷಗಳಿಂದ ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು, ಇದೇ ವಿಚಾರದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ, ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ನಿನ್ನೆ ರಾತ್ರಿ ಕೋಟೆಶ್ವರ ಗ್ರಾಮದ ಮೇಪುವಿನ ಬುಕ್ಕನಬೈಲು ರಸ್ತೆಯ ಸಮೀಪದ ಮನೆಯ ಬಳಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.