ಉಡುಪಿ: ಚಿಟ್ಪಾಡಿಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಉಡುಪಿ,ಡಿ.24 (ಉಡುಪಿ ಟೈಮ್ಸ್ ವರದಿ) : ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಚಿಟ್ಪಾಡಿಯ ಜಗನ್ನಾಥ ಕಂಪೌಂಡ್ ಪರಿಸರದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ದಿನೇಶ್ ರಾವ್ (52) ಆತ್ಮಹತ್ಯೆ ಮಾಡಿಕೊಂಡವರು.
ಇಲ್ಲಿಯ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ದಿನೇಶ್ ರಾವ್ ಅವರು ಮನೆಯ ಅಡಿಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪ್ರೊಬೇಷನರಿ ಎಸ್.ಐ ನಿರಂಜನ್, ಎ.ಎಸ್.ಐ ನಾರಾಯಣ, ಹೆಡ್ಕಾನ್ಸ್ಟಬಲ್ ಹರೀಶ್ ನಾಯ್ಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು, ನಗರ ಸಭೆ ಸದಸ್ಯ ವಿಜಯ ಪೂಜಾರಿ ಅವರು ಪೊಲೀಸರಿಗೆ ಕನೂನು ಪ್ರಕ್ರಿಯೆ ನಡೆಸುವಲ್ಲಿ ಸಹಕರಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.