ರಾಜ್ಯಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಡಾ. ಸುಧಾಕರ್
ಬೆಂಗಳೂರು ಡಿ.24 : ನೆರೆಯ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಲಾಗಿದೆ.
ಈ ಬಗ್ಗೆ ಮಹಿತಿ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಅವರು, ಚೀನಾದಲ್ಲಿ ಕೊರೋನಾ ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲೂ ಕೊರೋನಾ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದ್ದು ಬೇರೆ ದೇಶಗಳಲ್ಲಿ ಕೊರೋನಾ ತೀವ್ರತೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಕರ್ನಾಟಕ್ಕೆ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಬೇಕಾಗಿದೆ. ಈ ನಿಟ್ಟಿನಲ್ಲಿ ಮಾಸ್ಕ್ ಕಡ್ಡಾಯ ಧರಿಸಬೇಕಾಗಿದೆ ಅಷ್ಟೇ ಅಲ್ಲದೆ ಕೊರೋನಾ ನೆಗೆಟಿವ್ ರಿಪೋರ್ಟ್ ಇದ್ದರೆ ಮಾರ್ಗ ಅವರಿಗೆ ಬರೋದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.