ಉಡುಪಿ ಡಿ.24 (ಉಡುಪಿ ಟೈಮ್ಸ್ ವರದಿ): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಗರದ ಕಲ್ಪನಾ ಥಿಯೇಟರ್ ಮುಂಭಾಗದ ಎಟಿಎಂ ವೊಂದಕ್ಕೆ ನುಗ್ಗಿದ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯ ಇಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಎಟಿಎಂ ನ ಗೋಡೆ ಹಾಗೂ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.