ಕೋವಿಡ್ ಭೀತಿ: ಕೇಂದ್ರ ಆರೋಗ್ಯ ಇಲಾಖೆಯಿಂದ ರಾಜ್ಯಗಳಿಗೆ ಸೂಚನೆ
ಬೆಂಗಳೂರು ಡಿ.24 : ಚೀನದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಕೆಲವೊಂದು ಸೂಚನೆಗಳನ್ನು ನೀಡಿದೆ.
ಕೋವಿಡ್ ಮುಂಜಾಗೃತಾ ಕ್ರಮವಾಗಿ ಎಲ್ಲಾ ರಾಜ್ಯದ ಆರೋಗ್ಯ ಸಚಿವರೊಂದಿಗೆ ಕೇಂದ್ರ ಸಚಿವರು ಸಭೆ ನಡೆಸಿದ ಬಳಿಕ ಇದೀಗ ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದ್ದು, ಎಲ್ಲಾ ರಾಜ್ಯಗಳು ಸಹ ಆಕ್ಸಿಜನ್ ಸಿಲಿಂಡರ್ ಸ್ಟಾಕ್ ಇಟ್ಟುಕೊಳ್ಳಬೇಕು. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹೊಂಗ್ಕೊಂಗ್ ಮತ್ತೆ ಥೈಲ್ಯಾನ್ಡ್ ರಾಷ್ಟ್ರಗಳಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯವಾಗಿ ಮಾಡಬೇಕು ಎಂದು ಸೂಚಿಸಿದೆ.
ಹಾಗೂ ಬೇರೆ ದೇಶದಿಂದ ಬರುವ ಶೆ.2 ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ ಕೋವಿಡ್ ಟೆಸ್ಟ್ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜೀವ ರಕ್ಷಕ ಉಪಕರಣಗಳನ್ನ ಸಂಗ್ರಹಿಸಿಡಬೇಕು. ವೆಂಟಿಲೇಟರ್ ಸೇರಿದಂತೆ ಇತರೆ ಅಗತ್ಯ ಉಪಕಾರಣಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.