ಕಾಪು: ಕುಸಿದು ಬಿದ್ದು ವ್ಯಕ್ತಿ ಮೃತ್ಯು
ಕಾಪು ಡಿ.26 (ಉಡುಪಿ ಟೈಮ್ಸ್ ವರದಿ) : ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿವೇಕ್ ಭಗವಾನ್(74) ಮೃತಪಟ್ಟವರು.
ಖಾಸಗಿ ಕಂಪೆನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡಿಕೊಂಡಿದ್ದ ಅವರು ಡಿ.24 ರಂದು ಕೆಲಸ ಮುಗಿಸಿ ಮನೆಗೆ ಬಂದು ಹಣ್ಣು ತಿಂದು ಬಳಿಕ ಕುರ್ಚಿಯಲ್ಲಿ ಕುಳಿತುಕೊಂಡಿದ್ದರು. ಸಂಜೆ ವೇಳೆಗೆ ಒಮ್ಮೆಲೆ ಕೂಗಿಕೊಂಡು ಅಲ್ಲಿಯೇ ಕುರ್ಚಿಮೇಲೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ವಿವೇಕ್ ಭಗವಾನ್ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅದರಂತೆ ವಿವೇಕ್ ಭಗವಾನ್ ಅವರು ಹೃದಯಾಘಾತದಿಂದಲೋ ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರುವುದಾಗಿ ಮೃತರ ಮಗ ನೀಡಿದ ಮಾಹಿತಿಯಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.