ಶಿರ್ವ: ಟಿಟಿ ಮತ್ತು ಕಾರು ಮುಖಾಮುಖಿ ಡಿಕ್ಕಿ- ಇಬ್ಬರು ಗಂಭೀರ
ಶಿರ್ವ ಡಿ.26 : ಟೆಂಪೋ ಟ್ರಾವೆಲರ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶಿರ್ವ ಮುಖ್ಯ ರಸ್ತೆಯ ಸಂಗೀತಾ ಕಾಂಪ್ಲೆಕ್ಸ್ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾರಿನಲ್ಲಿದ್ದ ಶಿರ್ವ ಮಟ್ಟಾರಿನ ದಿನೇಶ್ ಮತ್ತು ಸೂರಜ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ.
ಮಲ್ಪೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್, ಬೆಳ್ಮಣ್ ನಿಂದ ಶಿರ್ವಕ್ಕೆ ಬರುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.