ಉಡುಪಿ: ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ಗೌರವ
ಉಡುಪಿ ಡಿ.26(ಉಡುಪಿ ಟೈಮ್ಸ್ ವರದಿ): ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಗೌರವಿಸಲಾಯಿತು
ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಉಡುಪಿಗೆ ಭೇಟಿನೀಡಿದ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ ಅವರು ಗೌರವಿಸಿದರು.
ಈ ಸಂದರ್ಭದಲ್ಲಿ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿರಾಜ್ ಎಚ್. ಪಿ, ಸಾಲುಮರದ ತಿಮ್ಮಕ್ಕ ಅವರ ಮಗ ಉಮೇಶ್ ವನಸಿರಿ, ಲೇಖಕ ಹಾಗೂ ಉರಗತಜ್ಞ ಗುರುರಾಜ್ ಸನಿಲ್, ಕಸಾಪ ಸದಸ್ಯ ಶಶಿಕಾಂತ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.