ಕಾಂಗ್ರೆಸ್ ನ ತತ್ವ ಸಿದ್ಧಾಂತಕ್ಕೆ ನಿಷ್ಠರಾಗಿದ್ದಲ್ಲಿ ಅಭ್ಯರ್ಥಿಗಳ ಗೆಲುವು ಖಚಿತ: ಹರೀಶ್ ಕಿಣಿ
ಉಡುಪಿ (ಉಡುಪಿ ಟೈಮ್ಸ್) ಕಾಂಗ್ರೆಸ್ ನ ತತ್ವ ಸಿದ್ಧಾಂತಕ್ಕೆ ನಿಷ್ಠರಾಗಿದ್ದಲ್ಲಿ ಚುನಾವಣೆ ಸ್ಪರ್ಧಿಸುವ ಅಭ್ಯರ್ಥಿಗಳು ಖಚಿತವಾಗಿ ಗೆಲುವು ಸಾಧಿಸುತ್ತಾರೆ ಎಂದು ಕೆ.ಪಿ.ಸಿ.ಸಿ. ಕೋ-ಆರ್ಡಿನೇಟರ್ ಹರೀಶ್ ಕಿಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡು ಅಲೆವೂರು 4ನೇ ವಾರ್ಡ್‌ನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿ ವಿಜಯಗಳಿಸಿದ ರೂಪೇಶ್ ದೇವಾಡಿಗ ಮತ್ತು ಶ್ರೀಲತಾ ಇವರಿಗೆ ಅಭಿನಂದನಾ ಸಮಾರಂಭ ಮತ್ತು ಮತದಾರರಿಗೆ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ನಿಂದ ಪಾರ್ಲಿಮೆಂಟ್ ವರೆಗೂ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಪಕ್ಷದ ತತ್ತ್ವ , ಸಿದ್ಧಾಂತಗಳಿಗೆ ನಿಷ್ಠರಾಗಿದ್ದಲ್ಲಿ ತಾವು ಜಯಗಳಿಸುವುದರ ಜೊತೆಗೆ ಕಾರ್ಯಕರ್ತರ ಶ್ರಮಕ್ಕೂ ಬೆಲೆ ದೊರೆತು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನ ಸೇವೆಗೆ ಅವಕಾಶ ದೊರೆಯುತ್ತದೆ ಎಂದರು.
ಅಲೆವೂರು ಗ್ರಾಮೀಣ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಅಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿ ಸದಸ್ಯರಾಗಿ ಆಯ್ಕೆಯಾದವರನ್ನು ಹಾಗೂ ಸ್ಪರ್ಧಿಸಿದ ಇತರ ಅಭ್ಯರ್ಥಿಗಳನ್ನು ಗೌರವಿಸಲಾಯಿತು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶ್ರೀಧರ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ಗೋಪಾಲ ಸೇರಿಗಾರ್, ಉದ್ಯಮಿ ಹರೀಶ್ ಕುಲಾಲ್, ಕಾಂಗ್ರೆಸ್ ಯುವ ಮುಖಂಡ ಅಶೋಕ್ ಸೇರಿಗಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಲಿತಾ ಸೇರಿಗಾರ್,ಯುವ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಸೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.