ಕೋವಿಡ್ ಹೊಸ ಗೈಡ್ ಲೈನ್ಸ್ ಪ್ರಕಟ-ಶಾಲಾ ಕಾಲೇಜ್ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಮಾರ್ಗಸೂಚಿ… ಇಲ್ಲಿದೆ ಮಾಹಿತಿ

ಬೆಂಗಳೂರು ಡಿ.26 : ಚೀನಾದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಭಾರತದಲ್ಲೂ ಸೋಂಕು ಹರಡುವ ಭೀತಿ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ರಾಜ್ಯ ಸರ್ಕಾರ ಹೊಸ ಮಾರ್ಗ ಸೂಚಿ ಪ್ರಕಟಿಸಿದೆ.

ಕೋವಿಡ್ ಮುನ್ನೆಚ್ಚರಿಕೆಯ ಕುರಿತು ನಡೆದ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಮಾತಾನಾಡಿದ ಸಚಿವ ಆರ್. ಅಶೋಕ್ ಅವರು, ಶಾಲಾ ಕಾಲೇಜು, ಸಿನಿಮಾ ಮಂದಿರ, ಬಸ್, ರೈಲು, ವಿಮಾನ ಸೇರಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ನೂತನ ವರ್ಷಾಚರಣೆಯ ಡಿ.31 ರ ರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ. ಎಲ್ಲರೂ ನಿಯಮವನ್ನು ಪಾಲಿಸಬೇಕೆಂದು ಸೂಚನೆ ನೀಡಿದರು.

ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಕಡ್ಡಾಯವಾಗಿರುತ್ತದೆ. ನೂತನ ವರ್ಷಾಚರಣೆ ಹೊಟೇಲ್ ರೆಸಾರ್ಟ್ ರೆಸ್ಟೋರೆಂಟ್ ಗಳಲ್ಲೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗ್ರಾಹಕರು ಮತ್ತು ಅಲ್ಲಿನ ಸಿಬ್ಬಂದಿ ಇದನ್ನು ಪಾಲಿಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿಲ್ಲ ಮುಂಜಾಗ್ರತಾ ಕ್ರಮವಹಿಸಬೇಕೆಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!