ಹೆಣ್ಣು ಮಕ್ಕಳ ರಕ್ಷಣೆಗಾಗಿ ಹಿಂದೂ ಮನೆಗಳಲ್ಲಿ ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಬೇಕು : ಪ್ರಜ್ಞಾ ಸಿಂಗ್ ಠಾಕೂರ್
ಶಿವಮೊಗ್ಗ ಡಿ.26 : ತಮ್ಮನ್ನು ರಕ್ಷಿಸಿಕೊಳ್ಳಲು ಹಿಂದೂ ಸಮುದಾಯದವರು ಮನೆಗಳಲ್ಲಿ ಆಯುಧಗಳನ್ನು ಹರಿತ ಮಾಡಿಟ್ಟುಕೊಳ್ಳಬೇಕು ಎಂದು ಭೋಪಾಲದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ್ಯದ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮುಂದೆ ಎಂಥ ಸಂದರ್ಭ ಬರುತ್ತದೋ ಗೊತ್ತಿಲ್ಲ. ಆತ್ಮ ರಕ್ಷಣೆಗಾಗಿ ನಾವು ದಾಳಿ ಮಾಡಬೇಕಾಗುತ್ತದೆ. ನಮ್ಮ ಹೆಣ್ಣು ಮಕ್ಕಳ ಸಂರಕ್ಷಣೆಗಾಗಿ ತರಕಾರಿ ಕತ್ತರಿಸುವ ಚಾಕುಗಳನ್ನು ಇನ್ನಷ್ಟು ಹರಿತವಾಗಿಸಿ ಸಿದ್ಧವಾಗಿಟ್ಟುಕೊಳ್ಳಿ. ಹೆಣ್ಣು ಮಕ್ಕಳನ್ನು ನಡೆದಾಡುವ ಆಟಂ ಬಾಂಬ್‍ಗಳಂತೆ ಸಿದ್ಧಪಡಿಸಬೇಕು. ನಮ್ಮ ಹೆಣ್ಣುಮಕ್ಕಳು ಲವ್ ಜಿಹಾದ್‍ನಲ್ಲಿ ಸಿಲುಕದಂತೆ ನೋಡಿಕೊಳ್ಳಬೇಕು’ ಹಾಗೂ ಮಕ್ಕಳಿಗೆ ಗೀತೋಪದೇಶ, ರಾಮಾಯಣ, ಹನುಮಾನ್ ಚಾಲಿಸಾ ಕಲಿಸಬೇಕು. ದೇಶದ, ಸಮಾಜದ ರಕ್ಷಣೆಗೆ ನಾವೆಲ್ಲ ಸದಾ ಬದ್ಧರಾಗಿರಬೇಕು ಎಂದು ಹೇಳಿದರು.