ಮುಸ್ಲಿಂ ಸಂಘಟನೆಗಳಿಂದ ಜ.22 ರಂದು ಬೆಂಗಳೂರು ಬಂದ್‌ಗೆ ಕರೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜನವರಿ 22 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಈ ಬಂದ್‌ಗೆ ಈ ಗಾಗಲೇ 22ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲವನ್ನೂ ವ್ಯಕ್ತಪಡಿಸಿವೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧ ಬಂಧನಕ್ಕೆ ಒಳಗಾಗಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು, ಲವ್ ಜಿಹಾದ್ ವಿರುದ್ಧ ಮತ್ತು ಕೃಷಿ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಬಂಧಿಸಲಾಗಿರುವ ಎಸ್‌ಡಿಪಿಐ ಮುಖಂಡ ಮುಜಾಮ್ಮಿಲ್ ಪಾಷಾ ಸೇರಿದಂತೆ 421 ಮಂದಿಯನ್ನು ಬಿಡುಗಡೆ ಮಾಡಬೇಕು ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂಬ ಬೇಡಿಕೆಗಳ ಈ ಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ ನೀಡಿದೆ
ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಂಘಟನೆಗಳ ಒಕ್ಕೂಟದ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಅವರು, ಶಾಂತಿಯುತವಾಗಿ ಬಂದ್ ನಡೆಯಲಿದೆ, ಯಾವುದೇ ರೀತಿಯಲ್ಲಿ ಗುಂಪುಗೂಡಿ ಪ್ರತಿಭಟನೆ ನಡೆಸುವುದಿಲ್ಲ. ಸ್ವಯಂ ಪ್ರೇರಿತವಾಗಿ ಬೆಂಗಳೂರಿನಲ್ಲಿ ಇರುವ ಮುಸ್ಲಿಂಮರು ಉದ್ಯಮಗಳನ್ನು ಬಂದ್ ಮಾಡಿ ಮನೆಯಲ್ಲಿ ಇರಲಿದ್ದಾರೆ. ಬೆಳಗ್ಗೆಯಿಂದ ಸಂಜೆ 5 ಗಂಟೆ ವರೆಗೆ ವ್ಯಾಪಾರ ಬಂದ್ ಮಾಡಲಿದ್ದಾರೆ ಎಂದು ಹೇಳಿದ್ದಾರೆ