ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು ಡಿ.29 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಹಾಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಹಾಗೂ ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30 ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!