ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಸದನ ರದ್ದು: ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಡಿ.29: ಮಂಡ್ಯಕ್ಕೆ ನಾಳೆ ಭೇಟಿ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ನಾಳಿನ ಸದನವನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಡೆಯ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಅವರು, ‘ಸದನವನ್ನು ಇನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

”ಇನ್ನೂ ಹದಿನೈದು ದಿನ ಚರ್ಚಿಸಿದರೂ ಮುಗಿಯದಷ್ಟು ಜನರ ಸಮಸ್ಯೆಗಳಿವೆ, ಅವೆಲ್ಲವನ್ನೂ ಬದಿಗೊತ್ತಿ ಅಮಿತ್ ಶಾ ಅವರ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿರುವುದು ಜನತೆಯ ಮೇಲೆ ಸರ್ಕಾರಕ್ಕಿರುವ ಅಸಡ್ಡೆಯನ್ನು ತೋರುತ್ತದೆ” ಎಂದು ಹೇಳಿದ್ದಾರೆ.

‘ಹಳೆಯ ಪಿಂಚಣಿ ಪದ್ಧತಿ ಮರುಜಾರಿ, ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ, ಚಿಕಿತ್ಸೆ ಸಿಗದೆ ತುಮಕೂರಿನಲ್ಲಿ ಬಾಣಂತಿ, ಹಸುಗೂಸಿನ ಸಾವು ಇಂಥಾ ಹತ್ತಾರು ವಿಷಯಗಳು ಇನ್ನೂ ಚರ್ಚೆಯಾಗಬೇಕಿವೆ. ರಾಜ್ಯ ಸರ್ಕಾರಕ್ಕೆ ಇದ್ಯಾವುದು ಬೇಕಿಲ್ಲ, ಅವರಿಗೆ ಬೇಕಿರುವುದು ಅಮಿತ್ ಶಾ ಅವರ ಕೃಪಾಕಟಾಕ್ಷ ಮಾತ್ರ’ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!