ಗುಜರಾತ್‍ ನ `ಅಮುಲ್’ ಜೊತೆಗೆ ಕರ್ನಾಟಕದ ನಂದಿನಿ’ ವಿಲೀನಕ್ಕೆ ಕ್ರಮ: ಅಮಿತ್ ಶಾ

ಮದ್ದೂರು ಡಿ.31 : ಮುಂದಿನ ದಿನಗಳಲ್ಲಿ ಗುಜರಾತ್‍ನ ಅಮುಲ್' ಜೊತೆಗೆ ಕರ್ನಾಟಕದನಂದಿನಿ’ ಯನ್ನು ವಿಲೀನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ತಾಲ್ಲೂಕಿನ ಗೆಜ್ಜಲಗೆರೆ ಜಿಲ್ಲಾ ಹಾಲು ಒಕ್ಕೂಟದ (ಮನ್ ಮುಲ್) ಆವರಣದಲ್ಲಿ ನಿರ್ಮಿಸಿರುವ ಮೆಗಾ ಡೇರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮನ್‍ಮುಲ್ ಆವರಣದಲ್ಲಿ 260 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮೆಗಾ ಡೇರಿ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ’. `ಗುಜರಾತ್ ನಲ್ಲಿ ಸಹಕಾರ ಒಕ್ಕೂಟವು ಪ್ರಗತಿಯ ಹಾದಿಯಲ್ಲಿದೆ. ಹಾಗೆಯೇ 1975 ರಿಂದಲೂ ಕೆಎಂಎಫ್ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್ ಹಾಗೂ ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗುತ್ತದೆ’ ಎಂದರು.

`ಮುಂದಿನ ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷಕ್ಕೂ ಅಧಿಕ ಪ್ರಾಥಮಿಕ ಡೇರಿಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪನೆ ಮಾಡಲಾಗುವುದು. ಆ ಮೂಲಕ ಹಾಲಿನ ಉತ್ಪನ್ನಗಳನ್ನು ಇತರ ರಾಷ್ಟ್ರಗಳಿಗೆ ರಫ್ತು ಮಾಡುವ ಗುರಿ ಹೊಂದಲಾಗಿದೆ’. ಕರ್ನಾಟಕದಲ್ಲಿ ಪ್ರಸ್ತುತ ಹಾಲು ಉತ್ಪಾದಕರಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಪ್ರತಿ ಲೀಟರ್ ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿದೆ. ಇದರಿಂದ ಸುಮಾರು 36 ಲಕ್ಷ ರೂ. ಹಾಲು ಉತ್ಪಾದಕರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, `ದೇಶ ಹಾಗೂ ರಾಜ್ಯದಲ್ಲಿ ಕ್ಷೀರ ಕ್ರಾಂತಿ ನಡೆಯುತ್ತಿದೆ. ಹೈನುಗಾರಿಕೆಯಿಂದ ರೈತರು ಆರ್ಥಿಕ ಪ್ರಗತಿ ಸಾಧಿಸುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಹಿಂದೆ ನಮ್ಮ ರಾಜ್ಯದ ಮೊದಲ ಬೆಂಗಳೂರು ಮೆಗಾ ಡೇರಿ ನಿರ್ಮಾಣಕ್ಕೆ ಕಾರಣರಾಗಿದ್ದವರು, ಅದನ್ನು ಯಾರೂ ಮರೆಯುವುದಿಲ್ಲ’ ಎಂದರು

ಇದೇ ವೇಳೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಾತನಾಡಿ, `ನಾನು ಪ್ರಧಾನಿಯಾಗಿದ್ದಾಗ ಸಹಕಾರ ಕ್ಷೇತ್ರದ ಉನ್ನತಿಗೆ ದುಡಿದಿದ್ದೆ. ದೇಶದ ಹಲವಾರು ಹಾಲಿನ ಸೊಸೈಟಿಗಳನ್ನು ಒಟ್ಟುಗೂಡಿಸಿ ಹಾಲು ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಲು ಶ್ರಮಿಸಿದ್ದೆ’ ಎಂದರು.

Leave a Reply

Your email address will not be published. Required fields are marked *

error: Content is protected !!