ಕೆರೆಯಲ್ಲಿ ಮುಳುಗಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಮೃತ್ಯು

ರಾಮನಗರ ಜ.2 : ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಈಜುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪ್ರಸನ್ನ ಭಟ್ (26) ಮೃತಪಟ್ಟವರು.

ನಿನ್ನೆ ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಅವರು, ಮಾವತ್ತೂರು ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಕನಕಪುರ ಗಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!