ಎಲ್ಲರನ್ನೂ ತೃಪ್ತಿಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಆರ್. ಅಶೋಕ

ಬೆಂಗಳೂರು: ಖಾತೆ ಬದಲಾವಣೆಯಿಂದ ಹಲವು ಸಚಿವರು ಅಸಮಾಧಾನಗೊಂಡಿರುವ ಕುರಿತು “ಎಲ್ಲರನ್ನೂ ತೃಪ್ತಿಪಡಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಎಲ್ಲರಿಗೂ ಒಳ್ಳೆಯ ಖಾತೆಗಳನ್ನು ಕೊಟ್ಟಿದ್ದಾರೆ” ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ ಬೆಂಗಳೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಇದೆ ಸಮಯದಲ್ಲಿ ಮಾತನಾಡಿದ ಅವರು ಕೊರೊನಾದಿಂದಾಗಿ ಸ್ಥಗಿತಗೊಳಿಸಲಾಗಿದ್ದ ಹಳ್ಳಿಗೆ ನಡೆಯಿರಿ ಜಿಲ್ಲಾಧಿಕಾರಿಗಳೇ ಕಾರ್ಯಕ್ರಮವನ್ನು ಮತ್ತೆ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ವಾಸ್ತವ್ಯ ಕಡ್ಡಾಯಗೊಳಿಸಲಾಗಿದೆ” ಎಂದು ತಿಳಿಸಿದರು.
ಹಳ್ಳಿ ಜನರ ಸಮಸ್ಯೆ ಆಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದು ತನ್ನ ಕನಸಿನ ಯೋಜನೆಯಾಗಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!